ಬೆಳಗಾವಿ, ಸುವರ್ಣ ವಿಧಾನಸೌಧ ಕ.ವಾ. (ಡಿ.10): ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಅವರು ವಿಧಾನ ಪರಿಷತ್‍ನಲ್ಲಿ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿದರು. ಸಾರಿಗೆ ಇಲಾಖೆಯ ನೌಕರರು ನಕಲಿ ಸೇವಾನುಭವ ಪ್ರಮಾಣಪತ್ರ ಪಡೆದು, ಸಂಜೆ ಪಾಲಿಟೆಕ್ನಿಕ್‍ನಲ್ಲಿ ಪ್ರವೇಶ ಪಡೆದು ವ್ಯಾಸಾಂಗ ಮಾಡುತ್ತಿರುವುದಾಗಿ ಬಂದಿರುವ ದೂರಿನ ಕುರಿತು ವರದಿ ನೀಡುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಾಂತ್ರಿಕ ಶಿಕ್ಷಣ ಇಲಾಖೆ, ಕೋರಿದ್ದರು.
ಈ ಸಂಬಂಧ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಿಗೆ ವರದಿ ನೀಡಿರುವ ತಾಂತ್ರಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ವರದಿಯಲ್ಲಿ “ಅರೆಕಾಲಿಕ ಡಿಪೆÇ್ಲೀಮಾ ಕೋರ್ಸ್‍ಗಳ ಪ್ರವೇಶಾತಿಗೆ 02 ವರ್ಷಗಳ ತಾಂತ್ರಿಕ ಸೇವಾನುಭವದೊಂದಿಗೆ ಸಂಬಂಧಪಟ್ಟ ತಾಂತ್ರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ದೂರಿನಲ್ಲಿ ನಮೂದಿಸಿದ 49 ಅಭ್ಯರ್ಥಿಗಳ ಪ್ರವೇಶದ ಸಂಪೂರ್ಣ ತನಿಖಾ ವರದಿಯನ್ನು ಲಗತ್ತಿಸಿ, 2 ವರ್ಷದ ತಾಂತ್ರಿಕ ಸೇವಾನುಭವದ ನೈಜತೆಯನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುಬೇಕು” ಎಂದು ತಿಳಿಸಿದ್ದಾರೆ.
ಸಾರಿಗೆ ಇಲಾಖೆಯಿಂದ ತಾಂತ್ರಿಕ ಸೇವಾನುಭವದ ನೈಜತೆಯನ್ನು ಪರಿಶೀಲಿಸಲು ಅವಕಾಶವಿಲ್ಲವಾದ್ದರಿಂದ ತಾಂತ್ರಿಕ ಶಿಕ್ಷಣ ಇಲಾಖೆಯಿಂದಲೇ ಸೇವಾನುಭವದ ನೈಜತೆಯನ್ನು ಪರಿಶೀಲಿಸಲು ಕೋರಲಾಗಿದೆ ಎಂದು ತಿಳಿಸಿದರು.ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿ
ಬಡ್ತಿ ಪಡೆದಿದ್ದರೆ ಕ್ರಮ : ಸಚಿವ ರಾಮಲಿಂಗರೆಡ್ಡಿ
ಬೆಳಗಾವಿ, ಸುವರ್ಣ ವಿಧಾನಸೌಧ ಕ.ವಾ. (ಡಿ.10): ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಅವರು ವಿಧಾನ ಪರಿಷತ್‍ನಲ್ಲಿ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿದರು. ಸಾರಿಗೆ ಇಲಾಖೆಯ ನೌಕರರು ನಕಲಿ ಸೇವಾನುಭವ ಪ್ರಮಾಣಪತ್ರ ಪಡೆದು, ಸಂಜೆ ಪಾಲಿಟೆಕ್ನಿಕ್‍ನಲ್ಲಿ ಪ್ರವೇಶ ಪಡೆದು ವ್ಯಾಸಾಂಗ ಮಾಡುತ್ತಿರುವುದಾಗಿ ಬಂದಿರುವ ದೂರಿನ ಕುರಿತು ವರದಿ ನೀಡುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಾಂತ್ರಿಕ ಶಿಕ್ಷಣ ಇಲಾಖೆ, ಕೋರಿದ್ದರು.
ಈ ಸಂಬಂಧ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಿಗೆ ವರದಿ ನೀಡಿರುವ ತಾಂತ್ರಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ವರದಿಯಲ್ಲಿ “ಅರೆಕಾಲಿಕ ಡಿಪೆÇ್ಲೀಮಾ ಕೋರ್ಸ್‍ಗಳ ಪ್ರವೇಶಾತಿಗೆ 02 ವರ್ಷಗಳ ತಾಂತ್ರಿಕ ಸೇವಾನುಭವದೊಂದಿಗೆ ಸಂಬಂಧಪಟ್ಟ ತಾಂತ್ರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ದೂರಿನಲ್ಲಿ ನಮೂದಿಸಿದ 49 ಅಭ್ಯರ್ಥಿಗಳ ಪ್ರವೇಶದ ಸಂಪೂರ್ಣ ತನಿಖಾ ವರದಿಯನ್ನು ಲಗತ್ತಿಸಿ, 2 ವರ್ಷದ ತಾಂತ್ರಿಕ ಸೇವಾನುಭವದ ನೈಜತೆಯನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುಬೇಕು” ಎಂದು ತಿಳಿಸಿದ್ದಾರೆ.
ಸಾರಿಗೆ ಇಲಾಖೆಯಿಂದ ತಾಂತ್ರಿಕ ಸೇವಾನುಭವದ ನೈಜತೆಯನ್ನು ಪರಿಶೀಲಿಸಲು ಅವಕಾಶವಿಲ್ಲವಾದ್ದರಿಂದ ತಾಂತ್ರಿಕ ಶಿಕ್ಷಣ ಇಲಾಖೆಯಿಂದಲೇ ಸೇವಾನುಭವದ ನೈಜತೆಯನ್ನು ಪರಿಶೀಲಿಸಲು ಕೋರಲಾಗಿದೆ ಎಂದು ತಿಳಿಸಿದರು.